ಕಾಸರಗೋಡು, ಸೆ. 05 (DaijiworldNews/AA): ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರ ಸಮೀಪದ ಮೀಯಪದವು ಅಡ್ಕದಗುರಿ ಎಂಬಲ್ಲಿ ನಡೆದಿದೆ.

ಅಡ್ಕದಗುರಿಯ ಐರಿನ್ ಡಿಸೋಜ (60) ಮೃತಪಟ್ಟವರು.
ಬುಧವಾರ ರಾತ್ರಿ ಮಲಗಿದ್ದ ಐರಿನ್ ಬೆಳಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ಮೃತದೇಹ ಮನೆ ಅಂಗಳದ ಬಾವಿಯಲ್ಲಿ ಪತ್ತೆಯಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು. ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು.