ಉಳ್ಳಾಲ, ಸೆ.21 (DaijiworldNews/TA): ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಉಳ್ಳಾಲದ ಸೋಮೇಶ್ವರ ಕಡಲ ಕಿನಾರೆಯಲ್ಲಿ ಶನಿವಾರ ಪತ್ತೆಯಾಗಿದೆ. ಕುಂಪಲ ಚೇತನನಗರ ನಿವಾಸಿ ವಿನೋದ್ ಕುಂಪಲ (49) ಮೃತರು. ವಿನೋದ್ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಶುಕ್ರವಾರ ಬೆಳಗ್ಗೆ ಮನೆಯಿಂದ ಹೊರಟ ಅವರು ಕೆಲಸಕ್ಕೂ ತೆರಳದೆ ರಾತ್ರಿ ಮನೆಗೂ ಮರಳದೆ ನಾಪತ್ತೆಯಾಗಿದ್ದರು. ಶನಿವಾರ ಮುಂಜಾನೆ ಸೋಮೇಶ್ವರ ಪುರಸಭಾ ಕಚೇರಿ ಬಳಿಯ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮೃತ ದೇಹ ವೊಂದು ಪತ್ತೆಯಾಗಿದ್ದು ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ಶವದ ಗುರುತು ಪತ್ತೆ ಹಚ್ಚಿದ್ದು, ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.