ಸುಳ್ಯ, ಸೆ.21 (DaijiworldNews/TA): ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ಧದ ಹೋರಾಟಕ್ಕೆ ಬೆಂಬಲವಾಗಿ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಶನಿವಾರ ಸುಳ್ಯ ನಗರದಲ್ಲಿ ನಡೆಯಿತು.



ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ವಕ್ತಾರ ಎಂ.ಜಿ ಹೆಗಡೆ ಮುಖ್ಯ ಭಾಷಣ ಮಾಡಿದರು. ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಮಾತನಾಡಿದರು. ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಡಿಸಿಸಿ ಕಾರ್ಯದರ್ಶಿ ರಾಧಕೃಷ್ಣ ಬೊಳ್ಳುರು ಇತರರು ಉಪಸ್ಥಿತರಿದ್ದರು.