ಉಡುಪಿ, ಸೆ. 21 (DaijiworldNews/AA): ಐಷಾರಾಮಿ ಸ್ಲೀಪರ್ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸಂತಕಟ್ಟೆಯಲ್ಲಿರುವ ಎಲ್ವಿಟಿ ದೇವಸ್ಥಾನದ ಬಳಿ ಸೆಪ್ಟೆಂಬರ್ 20ರ ತಡರಾತ್ರಿ ಸಂಭವಿಸಿದೆ.

ಬಸ್ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದರೆ, ಎದುರಿನಿಂದ ಬರುತ್ತಿದ್ದ ಕಾರು ಡಿವೈಡರ್ ಬಳಿ ಯೂ-ಟರ್ನ್ ತೆಗೆದುಕೊಳ್ಳಲು ಪ್ರಯತ್ನಿಸಿದೆ. ಈ ವೇಳೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ಎರಡೂ ವಾಹನಗಳಿಗೆ ಹಾನಿಯಾಗಿದೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.