ಮಂಗಳೂರು,ಸೆ. 25 (DaijiworldNews/AK): ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ 186 ಗ್ರಾಂ ಓಪಿಯಂ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ರಾಜಸ್ತಾನ ಮೂಲದ ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ವಾಸುದೇವ (48), ಮಂಗಲ್ ಚೌಧರಿ (45) ಎಂದು ಗುರುತಿಸಲಾಗಿದೆ.
ಬಂಧಿತರಿಂದ 40 ಸಾವಿರ ರೂ. ಮೌಲ್ಯದ ಐಫೋನ್, 50 ಸಾವಿರ ರೂ. ಮೌಲ್ಯದ ಬೈಕ್ ವಶಕ್ಕೆ ಪಡೆಯಲಾಗಿದೆ.