ಉಡುಪಿ, ಸೆ. 25 (DaijiworldNews/TA): ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಸಂಕ-ಗುಂಡಿಬೈಲು ಸಮೀಪ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಹಾಗೂ ಸಹಸವಾರನಿಗೆ ಗಂಭೀರ ಗಾಯಗಳಾಗಿದೆ..ಬೈಕ್ ಸವಾರ ಗಣೇಶ್ ಕರ್ಕೇರ, ಸಹಸವಾರ ಗಜೇಂದ್ರ ಅವರನ್ನು ಸ್ಥಳೀಯರ ಸಹಕಾರದಿಂದ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ..ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.