ಮಂಗಳೂರು, ಸೆ. 28 (DaijiworldNews/AA): ಕದ್ರಿ ಪಾರ್ಕ್ ಬಳಿಯ ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಕದ್ರಿ ಠಾಣೆ ಪೊಲೀಸರು ಸೆ.27ರಂದು ಬಂಧಿಸಿದ್ದಾರೆ.

ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ ಅಲಿಯಾಸ್ ಕುಂಟ ದೀಚು (22) ಬಂಧಿತ ಆರೋಪಿ.
ಆರೋಪಿಯಿಂದ 1 ಕೆ.ಜಿ. 150 ಗ್ರಾಂ ತೂಕದ ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ಹಾಗೂ ಸ್ಕೂಟರ್ ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ ಅನಂತ ಪದ್ಮಾನಾಭ, ಪಿಎಸ್ಐ ಜ್ಯೋತಿ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.