ಪಡುಬಿದ್ರೆ, ಅ. 17 (DaijiworldNews/AA): ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37) ಮೃತ ದುರ್ದೈವಿ.
ರಫೀಕ್ ಶುಕ್ರವಾರ ಮುಂಜಾನೆ ಮನೆಯಿಂದ ಮಸೀದಿಗೆ ರಿಕ್ಷಾದಲ್ಲಿ ತೆರಳಿದ್ದರು. ಈ ವೇಳೆ ಹೆಜಮಾಡಿ ಬೈಪಾಸ್ ಬಳಿ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ರಫೀಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಭೀರ ಗಾಯಗೊಂಡಿದ್ದ ರಫೀಕ್ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.