ಉಡುಪಿ, ಅ. 22 (DaijiworldNews/ TA): ಪೊಡವಿಗೊಡೆಯ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೋಪೂಜೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡಲಾಯಿತು. ಈ ಪ್ರಯುಕ್ತ ಕನಕ ಗೋಪುರದ ಎದುರು ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಗೋವುಗಳಿಗೆ ವಿಶೇಷ ಗೋಗ್ರಾಸವನ್ನು ನೀಡಿದರು.

ನಂತರ ರಥಬೀದಿಯ ಸುತ್ತಲೂ ಗೋವುಗಳ ವೈಭವದ ಮೆರವಣಿಗೆ ನಡೆಯಿತು. ನಂತರ ಶ್ರೀ ಕೃಷ್ಣ ಮಠದ ಆವರಣದಲ್ಲಿ ಸಂಕಲ್ಪ ಸಹಿತ ಸಾಮೂಹಿಕ ಗೋಪೂಜೆ ಕಾರ್ಯಕ್ರಮವು ನಡೆಯಿತು. ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.