ಉಡುಪಿ, ಅ. 23 (DaijiworldNews/ TA): ಚಿರತೆಯೊಂದು ಚಲಿಸುತ್ತಿದ್ದ ಬೈಕ್ ಗೆ ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಚಿರತೆ ಸ್ಥಳದಲ್ಲೇ ಮೃತಪಟ್ಟರೆ ಬೈಕ್ ಸವಾರ ನಂಚಾರ್ ಭಾಸ್ಕರ್ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದಾರೆ.

ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು. ಬೈಕ್ ಸವಾರ ಗಂಭೀರ ಗಾಯ ಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.