ಮಂಗಳೂರು, ಅ. 23 (DaijiworldNews/ TA): ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರವು ಜಿಎಸ್ಟಿ ದರ ಕಡಿತದ ಮೂಲಕ ಜನ ಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರಕಾರದ ಜಿಎಸ್ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೆ ಸುಳ್ಳು ಹೇಳಿಕೆ ನೀಡುವ ಮೂಲಕ ಹತಾಶೆ ವ್ಯಕ್ತಪಡಿ ಸುತ್ತಿದ್ದಾರೆ ಎಂದು ಸಂಸದ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ಪುತ್ತೂರಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಕರ್ನಾಟಕ ಸೇರಿ ಇಡೀ ದೇಶದ ಜನರಿಗೆ ಅನುಕೂಲ ತಂದಿ ರುವ ಜಿಎಸ್ಟಿ ತೆರಿಗೆ ಇಳಿಕೆ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ಚೌಟ ಹೇಳಿದ್ದಾರೆ. 5,000 ಕೋಟಿ ರೂ. ಕರ್ನಾಟಕಕ್ಕೆ ನಷ್ಟವಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿಕೆಗೆ ಯಾವುದೇ ಆಧಾರ ವಿಲ್ಲ. ತಮ್ಮ ಸರ್ಕಾರದ ಆರ್ಥಿಕ ಅಧೋಗತಿಯನ್ನು ಮುಚ್ಚಿ ಹಾಕುವುದಕ್ಕೆ ಪದೇಪದೇ ಮೋದಿ ಸರಕಾರದ ಮೇಲೆ ಗೂಬೆಕೂರಿಸುವ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವು ದಿಲ್ಲ.
ಮೋದಿ ಸರ್ಕಾರವು ಜಿಟಿಎಸ್ ಸ್ಲ್ಯಾಬ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವುದರಿಂದ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಆರ್ಥಿಕ ಲಾಭವುಂಟು ಮಾಡಿದೆ. ಆದರೆ, ಯಾವುದೇ ಅಂಕಿ-ಅಂಶ ಅಥವಾ ದಾಖಲೆ ಯಿಲ್ಲದೆ ಸಿದ್ದರಾಮಯ್ಯನವರು ಸಾರ್ವಜನಿಕ ವೇದಿಕೆಯಲ್ಲಿ ನಿಂತು ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡುತ್ತಿ ದ್ದಾರೆ ಎಂದು ಟೀಕಿಸಿದ್ದಾರೆ.