ಮಂಗಳೂರು, ನ. 01 (DaijiworldNews/AA): ನಗರದ ಕೊಟ್ಟಾರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್ಸೊಂದು ರಸ್ತೆಯ ಡಿವೈಡರ್ ಮೇಲೇರಿದ ಘಟನೆ ಅ. 31 ರಂದು ನಡೆದಿದೆ.

ಬಸ್ಸಿನ ಬ್ರೇಕ್ ಪೆಡಲ್ ಸಮಸ್ಯೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆದರೆ ಚಾಲಕ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಬಸ್ ಚಲಾಯಿಸುತ್ತಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಂಚಾರ ವಿಭಾಗದ ಡಿಸಿಪಿ ಭರವಸೆ ನೀಡಿದ್ದಾರೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.