ಉಡುಪಿ, ನ. 01 (DaijiworldNews/AK):ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಂದ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು.












ನಂತರ ಪೊಲೀಸ್, ಎನ್ ಸಿ ಸಿ, ಇತ್ಯಾದಿ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿ, ಪಥ ಸಂಚಲನೆ ವೀಕ್ಷಿಸಿದರು. ಬಳಿಕ ರಾಜ್ಯೋತ್ಸವ ಸಂದೇಶವನ್ನು ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನತೆಯು ವಿಶಿಷ್ಟ ಆಚಾರ -ವಿಚಾರ, ಪರಂಪರೆ, ಸಂಸ್ಕೃತಿಯನ್ನು ಹೊಂದುವುದರ ಜೊತೆಗೆ ಸಮಾಜದ ಒಳಿತಿಗಾಗಿ ಸಮಾಜಸೇವಾ ಕಾರ್ಯದಲ್ಲೂ ಮುಂದಿದ್ದಾರೆ. ಕಳೆದ ಮಾಹೆಯಲ್ಲಿ ನಾನೇ ಉದ್ಘಾಟಿಸಿದ ನೀರೆ ಗ್ರಾಮ ಪಂಚಾಯತಿ ಕಟ್ಟಡಕ್ಕೆ ಸರ್ಕಾರದ ಅನುದಾನದ ಜೊತೆಗೆ ಸಾರ್ವಜನಿಕ ದೇಣಿಗೆಯಿಂದ ತಾಲೂಕು ಮಟ್ಟದ ಕಟ್ಟಡ ರೀತಿಯಲ್ಲಿ ಸುಸಜ್ಜಿತವಾದ ಗ್ರಾಮ ಪಂಚಾಯತ್ ನಿರ್ಮಾಣ ಮಾಡಿರುವುದು ಇದಕ್ಕೆ ಸಾಕ್ಷಿ. ಕಳೆದವಾರ ಜಿಲ್ಲಾ ಆಸ್ಪತ್ರೆಗೆ ದೇವದಾಸ್ ಕುಟುಂಬಸ್ಥರು 25 ಲಕ್ಷ ರೂ. ಮೊತ್ತದ ಅಲ್ವಾ ಸೌಂಡ್ ಸ್ಕ್ಯಾನಿಂಗ್ ಯಂತ್ರವನ್ನು ದೇಣಿಗೆಯಾಗಿ ನೀಡಿದ್ದಾರೆ. ಇಂತಹ ಸಮಾಜಮುಖಿ ಕಾರ್ಯಗಳು ಜಿಲ್ಲೆಯಾದ್ಯಂತ ನಿರಂತರವಾಗಿ ನಡೆಯುತ್ತಿರುವುದು ಶ್ಲಾಘನೀಯ ವಿಷಯ.ಎಂದು ಹೇಳಿದರು .
ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 77 ಮಂದಿ ಸಾಧಕರು ಮತ್ತು ಸಂಘಟನೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು