ಕಾಸರಗೋಡು, ನ. 01 (DaijiworldNews/AK): ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತತನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ನೌಫಲ್ ನ ಮೃತದೇಹವನ್ನು ಕಾಸರಗೋಡಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.