ಉಡುಪಿ, ನ. 26 (DaijiworldNews/AK):ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಯ ಶ್ರೀ ಕೃಷ್ಣ ಮಠ ಭೇಟಿ ನೀಡುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಸೂಚನೆ ನೀಡಿದ್ದಾರೆ.

ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ ವಠಾರ, ಹಾಗೂ ಪ್ರವಾಸಿ ಮಂದಿರದ ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಅಲ್ಲದೆ ಪ್ರಧಾನಿಗಳು ಸಂಚರಿಸುವ ಮಾರ್ಗದ ಇಕ್ಕೆಲಗಳ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚಿಸಲಾಗಿದೆ.
ನವೆಂಬರ್ 28 ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಂಗಡಿ ಮುಚ್ಚುವಂತೆ ಡಿಸಿ ಸೂಚಿಸಿದ್ದಾರೆ. ಇನ್ನು ನವಂಬರ್ 26 ಬೆಳಿಗ್ಗೆ 6ಗಂಟೆಯಿಂದ ನವಂಬರ್ 28 ಸಂಜೆ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಉಳಿದಂತೆ ಪ್ರಧಾನಿಗಳ ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಹಲವು ಸೂಚನೆಗಳನ್ನು ಕೂಡ ನೀಡಲಾಗಿದೆ.
ಬ್ಯಾಗ್, ನೀರಿನ ಬಾಟಲ್, ಧ್ವಜ, ಸ್ಟಿಕರ್ಸ್, ಬಲೂನ್ಸ್ ,ಪಟಾಕಿ, ಲೂಸ್ ಪಾಲಿಥಿನ್ ತರುವುದು ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.