ಉಡುಪಿ, ನ. 27 (DaijiworldNews/AK): ರಾಜ್ಯದಲ್ಲಿ ಎರಡು ತಿಂಗಳಿಂದ ಆಡಳಿತ ನಡೆಯುತ್ತಿಲ್ಲ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ ಎಂದು ಉಡುಪಿಯಲ್ಲಿ ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನ ನಡೆಯುತ್ತಿದೆ. ಶೇಕಡ 90 ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ- ಡಿಸಿಎಂ ಡೆಲ್ಲಿಗೆ ಸೀಮಿತರಾಗಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುತ್ತೇವೆ. ಈ ಸರ್ಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿದೆ.
ಸಿಎಂ ಡಿಸಿಎಂ ಮಂತ್ರಿ ಶಾಸಕರ ನಡುವೆ ವಿಶ್ವಾಸವಿಲ್ಲ. ಸದನದಲ್ಲಿ ನಾವು ವಿಶ್ವಾಸ ಮತವನ್ನುಯಾಚಿಸುತ್ತೇವೆ. ಎಂಡಿಎ ಒಕ್ಕೂಟದಲ್ಲೂ ಕೂಡ ಈ ಬಗ್ಗೆ ಮಾತುಕತೆ ಮಾಡುತ್ತೇವೆ. ರಾಜ್ಯದ ಹಿತ ಮರೆತಿರುವ ಸರ್ಕಾರವನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದರು.