ಬಂಟ್ವಾಳ, ನ. 27 (DaijiworldNews/ AK): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ,ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ, ಬಂಟ್ವಾಳ ಮತ್ತು ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ನವೆಂಬರ್ 27ರಂದು ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ತಾಲೂಕು ಮಟ್ಟದ ಈ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಒಟ್ಟು 14 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರೌಢ ವಿಭಾಗದ ಭಾವಗೀತೆ ಸ್ಪರ್ಧೆಯಲ್ಲಿ ತನ್ವಿ ಜೆ ಪಿ ಎಂಟನೇ ತರಗತಿ ಪ್ರಥಮ ಸ್ಥಾನ, ಪ್ರತೀಕ್ಷಾ ಹತ್ತನೇ ತರಗತಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕವನವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪ್ರಾಥಮಿಕ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ಆದ್ಯ ವಿ ಜಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಪ್ರಥಮ ಸ್ಥಾನವನ್ನು ಪಡೆದ ಪ್ರತೀಕ್ಷಾ ಹಾಗೂ ತನ್ವಿ ಜೆ ಪಿ ಇವರು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದು, ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ತೋರಿದ ಅತ್ಯುತ್ತಮ ಸಾಧನೆಯನ್ನು ಶ್ಲಾಘಿಸಿ
ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಬೋಧಕ ಬೋಧಕೇತರ ವೃಂದದವರು ಭಾಗವಹಿಸಿದರು ಹಾಗೂ ಪ್ರಶಸ್ತಿ ವಿಜೇತ ಮಕ್ಕಳನ್ನು ಅಭಿನಂದಿಸಿ ಶುಭ ಹಾರೈಸಿದರು.