ಉಪ್ಪಿನಂಗಡಿ, ಡಿ. 03 (DaijiworldNews/AA): ಅಪ್ರಾಪ್ತ ಬಾಲಕಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಪೈಕಿ ಪ್ರಮುಖ ಆರೋಪಿಯು ಅಪ್ರಾಪ್ತನೆಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಪ್ರಕರಣದ ದೂರುದಾರರ ಅಪ್ರಾಪ್ತ ಪ್ರಾಯದ ಮಗಳು, ನ.4 ರಂದು ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡು, ನ. 12ರಂದು ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ನಂಬ್ರ: 56/2025 ಕಲಂ: 194 (3) (IV)BNSS ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣ ಮುಂದುವರಿದಂತೆ, ಮೃತ ಬಾಲಕಿಯನ್ನು ಓರ್ವ ಆರೋಪಿಯು ಲೈಂಗಿಕವಾಗಿ ಬಳಸಿಕೊಂಡಿಕೊಂಡಿದ್ದು, ಮತ್ತೋರ್ವ ಆರೋಪಿಯೊಂದಿಗೆ ಸೇರಿ ಬಾಲಕಿಗೆ ಕಿರುಕುಳ ನೀಡಿ, ಬೆದರಿಸಿರುವುದರಿಂದ ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ, ಮೃತ ಬಾಲಕಿಯ ತಾಯಿ ನ. 28ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಮೇರೆಗೆ ಅ.ಕ್ರ: 111/2025 ಕಲಂ ಕಲಂ: 74, 79, 108 ಜೊತೆಗೆ 3(5) BNS & ಕಲಂ: 8 ಫೋಕ್ಸೋ ಕಾಯ್ದೆ ರಂತೆ ಪ್ರಕರಣ ದಾಖಲಾಗಿರುತ್ತದೆ.