ಮಂಗಳೂರು, ಡಿ. 04 (DaijiworldNews/TA): ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿ ಭಾಗದ ವಕೀಲರ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.
ಅವರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಅವರು ಆಶ್ವಾಸನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ., ಪ್ರಧಾನ ಸರಕಾರಿ ಅಭಿಯೋಜಕರಾದ ಎಂಪಿ ನರೋನ್ಹ, ಟಿ.ಎನ್. ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.