ಮಂಗಳೂರು, ಡಿ. 15 (DaijiworldNews/TA): ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಡಿ.16ರಂದು ಮಂಗಳೂರಿನ ಕದ್ರಿ ಯುದ್ಧ ಸ್ಮಾರಕದಲ್ಲಿ ವಿಜಯ್ ದಿವಸ್ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ. ದೇಶಕ್ಕಾಗಿ ಹೋರಾಡಿ ಹುತಾತ್ಮರಾದ ಯೋಧರಿಗೆ ಪುಷ್ಪಗುಚ್ಛಗಳನ್ನು ಸಲ್ಲಿಸುವ ಮೂಲಕ ನಮನ ಸಲ್ಲಿಸಲಾಗುವುದು. 1971 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಯುದ್ಧದಲ್ಲಿ ಭಾರತದ ವಿಜಯ ಸಾಧಿಸಿದ ದಿನವನ್ನು ದೇಶವಾಸಿಗಳು ಎಂದೂ ಮರೆಯುವಂತಿಲ್ಲ. ಸ್ಮರಣೆಯನ್ನು ಸದಾ ಮಾಡುತ್ತಿರಬೇಕೆಂಬ ನೆಲೆಯಲ್ಲಿ ಪ್ರತಿವಷ ಡಿ.16ರಂದು ವಿಜಯ ದಿವಸ್ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿ.ಪಂ. ಸಿಇಒ ನರ್ವಾಡೆ ವಿನಾಯಕ ಕರ್ಬಾರಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್, ಡಿಐಜಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರಮುಖರಾದ ವಿರಾಜ್ ಕಾಮತ್, ಅರುಣ್ ಕೆ, ವಿಶಾಲ್ ಹೆಗ್ಡೆ ರಾಮಕೃಷ್ಣ, ಕುಡಿ ಅರವಿಂದ ಶೆಣೈ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.