ದೇರಳಕಟ್ಟೆ, ಡಿ. 15 (DaijiworldNews/TA): ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಕೋಟೆಕಾರ್ ಅಜ್ಜಿನಡ್ಕದ ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ.) ಮತ್ತು ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜ್ಜಿನಡ್ಕ ಇವರುಗಳ ಜಂಟಿ ಸಹಯೋಗದಲ್ಲಿ ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರವು ಡಿಸೆಂಬರ್ 6 ರಂದು ಅಜ್ಜಿನಡ್ಕ ಶಾಲಾ ಸಭಾಂಗಣದಲ್ಲಿ ಜರುಗಿತು.



ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾದ ಅಹಮದ್ ಅಜ್ಜಿನಡ್ಕ ಹಾಗೂ ಬದ್ರಿಯಾ ವೆಲ್ಫೇರ್ ಸೊಸೈಟಿಯ ಅಧ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕರವರು ಶಿಬಿರಕ್ಕೆ ಶುಭ ಹಾರೈಸಿದರು. ಫಾದರ್ ಮುಲ್ಲರ್ ಹೋಮಿಯೋಪಥಿ ಆಸ್ಪತ್ರೆಯ ವೈದ್ಯರಾಗಿರುವ ಡಾ.ಅನಿತಾ ಲೋಬೋರವರು ಹೋಮಿಯೋಪಥಿ ಚಿಕಿತ್ಸೆಯ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಬದ್ರಿಯಾ ವೆಲ್ಫೇರ್ ಸೊಸೈಟಿಯ ಉಪಾಧ್ಯಕ್ಷರಾದ ಸಿ.ಎಚ್.ಇಸ್ಮಾಯಿಲ್, ಕಾರ್ಯದರ್ಶಿ ಬಾತೀಷ್ ಸುಲೈಮಾನ್, ಕೋಶಾಧಿಕಾರಿ ಹಂಝ ಕೋಟೆಕಾರ್, ಅಜ್ಜಿನಡ್ಕ ಶಾಲೆಯ ಮುಖ್ಯೋಪಾಧ್ಯಾಯಿನಿ ರಜಿಯಾ, ಅಂಗನವಾಡಿ ಕಾರ್ಯಕರ್ತೆ ಹರಿಣಾಕ್ಷಿ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು. ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿ ಆಸ್ಪತ್ರೆಯ MSW ಶೌವಾದ್ ಗೂನಡ್ಕ ಸ್ವಾಗತಿಸಿ, ಶಿಬಿರವನ್ನು ಸಂಯೋಜಿಸಿದರು.