ಮಂಗಳೂರು, ಡಿ. 15 (DaijiworldNews/AK): ಡಿಸೆಂಬರ್ 15 ಸೋಮವಾರ ನೆಹರೂ ಮೈದಾನದ ಬಳಿ ಇರುವ ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್ಟಿಒ) ಅಧಿಕೃತ ಇಮೇಲ್ ಐಡಿಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ. ಸದ್ಯ ಆರ್ಟಿಒ ಕಚೇರಿಗೆ ಮಂಗಳೂರು ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಕಟ್ಟಡವನ್ನು ತಪಾಸಣೆ ನಡೆಸಲಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಐದು ಸ್ಥಳಗಳಲ್ಲಿ ಬಾಂಬ್ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಇಮೇಲ್ ಕಳುಹಿಸಿದ್ದಾರೆ. ಭಾನುವಾರ ತಡರಾತ್ರಿ ಬೆದರಿಕೆ ಇಮೇಲ್ ಬಂದಿದೆ. ಸೋಮವಾರ ಮಧ್ಯಾಹ್ನದ ಸುಮಾರಿಗೆ ಆರ್ಟಿಒ ಅಧಿಕಾರಿಗಳು ಇಮೇಲ್ ಅನ್ನು ಗಮನಿಸಿದ್ದಾರೆ. ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಶೋಧದ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಇಮೇಲ್ನ ಮೂಲವನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.