ಉಡುಪಿ, ಡಿ. 15 (DaijiworldNews/AK):ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಸೋಮವಾರ ಐದನೇ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಡುಪಿಯ ಮಿಷನ್ ಕಾಂಪೌಂಡ್ ಬಳಿಯ ಶಾಂತಿ ನಗರದ ನಿವಾಸಿ ಮಾಲಿ ಮೊಹಮ್ಮದ್ ಸಿಯಾನ್ (31) ಎಂದು ಗುರುತಿಸಲಾಗಿದೆ. ಪೊಲೀಸರು ಬೆಳಿಗ್ಗೆ 10.30 ರ ಸುಮಾರಿಗೆ ಎಂಜಿಎಂ ಕಾಲೇಜು ಬಸ್ ನಿಲ್ದಾಣದ ಬಳಿ ಆತನನ್ನು ಬಂಧಿಸಿದ್ದಾರೆ .
ಬಂಧನದ ವೇಳೆ ಅಪರಾಧ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ KA20 MF 207 ನೋಂದಣಿ ಸಂಖ್ಯೆಯನ್ನು ಹೊಂದಿರುವ ಕಾರನ್ನು ಮತ್ತು ಆರೋಪಿಗಳು ಬಳಸಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡರು.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.