ಮಂಗಳೂರು, ಡಿ. 16 (DaijiworldNews/AA): ಟ್ಯಾಂಕರ್ನ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ತಲಪಾಡಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಈ ವೇಳೆ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಎಂಡಿಎಂಎ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.


ಗಾಯಗೊಂಡವರನ್ನು ಪಲ್ಲಂ ಸಿದ್ದೀಕ್ ಮತ್ತು ಮಣಿಮುಂಡ ಆಡಂ ಎಂದು ಗುರುತಿಸಲಾಗಿದೆ. ಸ್ಥಳೀಯ ನಿವಾಸಿಗಳು ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ನಂತರ, ಸ್ಥಳೀಯರು ಕಾರಿನೊಳಗೆ ಅನುಮಾನಾಸ್ಪದ ಮಾದಕ ವಸ್ತುಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಸಂಚಾರ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ಕಾರಿನಲ್ಲಿದ್ದ 130 ಗ್ರಾಂ ನಿಷೇಧಿತ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಈ ಮಾದಕ ವಸ್ತುವಿನ ಮೌಲ್ಯವು ಲಕ್ಷಾಂತರ ರೂಪಾಯಿಗಳಷ್ಟಿದೆ ಎಂದು ಅಂದಾಜಿಸಲಾಗಿದೆ.
ಈ ಪ್ರಕರಣದ ಕುರಿತು ಉಳ್ಳಾಲ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.