ಮಂಗಳೂರು, ಡಿ. 25 (DaijiworldNews/TA): ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದ್ವೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ.

ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ಅಕ್ರೋಶ ಹೊರ ಹಾಕಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಕೊಟ್ಟಾರಿ, ಮಂಗಳೂರು ಮಹಾನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯರು, ಬಿಜೆಪಿ ಪಕ್ಷದ ಮುಖಂಡರು ಭಾಗವಹಿಸಿದ್ದರು.