ಮಂಗಳೂರು, ಜ. 26 (DaijiworldNews/TA): ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮಂಗಳೂರಿನ ಬಹುನಿರೀಕ್ಷಿತ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆಯನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಉದ್ಘಾಟಿಸಿದರು.


ಸ್ವೀಕರ್ ಯು.ಟಿ. ಖಾದರ್ ಮಾತನಾಡಿ, ಅಂಡರ್ ಪಾಸ್ ಕೆಲ ಸೇತುವೆ ನಿರ್ಮಾಣದಿಂದಾಗಿ ಉಳ್ಳಾಲ ಕ್ಷೇತ್ರದವರಿಗೆ ಮಂಗಳೂರು ನಗರಕ್ಕೆ ಬರಲು ಹೆಚ್ಚು ಪ್ರಯೋಜನವಾಗಿದೆ. ತಾನು ನಗರಾಭಿವೃದ್ಧಿ ಸಚಿವರಾಗಿದ್ದಾಗ ಈ ಯೋಜನೆ ರೂಪಿಸಲಾಗಿತ್ತು. ಇದೀಗ ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಯಾಗಿರುವ ಹಿನ್ನೆಲೆಯಲ್ಲಿ ತುಂಬಾ ಖುಶಿ ನೀಡಿದೆ. ಇನ್ನೂ ಮಂಗಳೂರು ನಗರದಲ್ಲಿ ಎರಡರಿಂದ ಮೂರು ಅಂಡರ್ ಪಾಸ್ ನಿರ್ಮಾಣ ಅಗತ್ಯ. ಇದರಿಂದ ವಾಹನಗಳ ಸುಗಮವಾಗಿ ಸಂಚಾರಕ್ಕೆ ಅನುಕೂಲ ವಾಗಲಿದೆ ಎಂದು ನುಡಿದರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರುಗಳಾದ ಶಾಲೆಟ್ ಪಿಂಟೊ, ಟಿ.ಎಂ. ಶಾಹಿದ್, ಮಮತಾ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.