ಬಂಟ್ವಾಳ, ಜ. 26 (DaijiworldNews/TA): ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ ರೋಡಿನ ಆಡಳಿತ ಸೌಧದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆಯ ಧ್ವಜರೋಹಣ ನೆರವೇರಿತು.

ಈ ಸಂದರ್ಭ ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಜನತೆಗೆ ಶುಭಾಶಯ ಕೋರಿದರು. ಬುಡಾ ಅಧ್ಯಕ್ಷ ಬೇಬಿ ಕುಂದರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು.