ಉಡುಪಿ, ಜ. 27 (DaijiworldNews/AK ): ಕೋಡಿಬೆಂಗ್ರೆಯಲ್ಲಿ ಪ್ರವಾಸಿ ದೋಣಿ ಮುಳುಗಿದ ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.

ಮೃತರನ್ನು ಮೈಸೂರು ನಿವಾಸಿ ದಿಶಾ (23) ಎಂದು ಗುರುತಿಸಲಾಗಿದೆ.
ಜನವರಿ 26 ರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಮೈಸೂರಿನಿಂದ ಕೋಡಿಬೆಂಗ್ರೆಗೆ ರಜೆಯ ಮೇಲೆ ಬಂದಿದ್ದ ಯುವಕರ ಗುಂಪೊಂದು ಪ್ರಯಾಣಿಸುತ್ತಿದ್ದ ಪ್ರವಾಸಿ ದೋಣಿ ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅದೇ ದಿನ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಸಾವಿನ ಸಂಖ್ಯೆ ಈಗ ಮೂರಕ್ಕೆ ಏರಿದೆ. ಉಳಿದ ಗಾಯಗೊಂಡವರಿಗೆ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.