ಮಂಗಳೂರು, ಫೆ. 28 (DaijiworldNews/TA): ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ (ರಿ) ಮಂಗಳೂರು ಇದರ ವಾರ್ಷಿಕೋತ್ಸವ ಸಮಾರಂಭ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಂದಿನಿ ಸಭಾ ಭವನದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅರ್ಜುನ್ ಭಂಡರ್ಕರ್ ಇತರ ಗಣ್ಯರು ಸೇರಿ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.

ಈ ಸಂಧರ್ಭ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಾಗಿ ಉತ್ತಮ ಸೇವೆ ಸಲ್ಲಿದವರಿಗೆ ಅಭಿನಂದನೆ ಸಮಾರಂಭ ಮತ್ತು ನಿವೃತ್ತರಿಗೆ ಗೌರವ ಸನ್ಮಾನ ಹಾಗೂ ತೀರಾ ಸಂಕಷ್ಟದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯರಾದ ಸುಮಂತ್ ರಾವ್, ಮಂಗಳೂರಿನ ಉದ್ಯಮಿ ನಿಶ್ಮಿತ ಶೋನಿತ್, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಂಜುಳಾ ಜೆ, ಹಿರಿಯ ಮೇಲ್ವಿಚಾರಕಿ ಅಶ್ವಿನಿ, ಇಲಾಖಾ ಮೇಲ್ವಿಚಾರಕಿ ಅನುಪಮ, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಕಾರ್ಯದರ್ಶಿ ಮಮತಾ ಅಣ್ಣಯ್ಯ ಕುಲಾಲ್, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಕೋಶಾಧಿಕಾರಿ ವಿಶಾಲಾಕ್ಷಿ, ದ.ಕ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರಿ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಬಿ ಆರ್, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಜಿಲ್ಲಾ ಅಧ್ಯಕ್ಷೆ ತಾರ ಬಲ್ಲಾಳ್, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಮಾಜಿ ಅಧ್ಯಕ್ಷೆ ಆಶಾಲತ ಎಂ ವಿ, ಸಮಾಜ ಸೇವಕಿ ಶಂಶಾದ್, ಬಂಟ್ವಾಳ ತಾಲೂಕು ಸಂಘದ ಅಧ್ಯಕ್ಷೆ ವಿಜಯವಾಣಿ, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಮಂಗಳೂರು ಅಧ್ಯಕ್ಷೆ ಶೀಲಾವತಿ, ಕಾರ್ಯದರ್ಶಿ ಸುಜಾತ ರೈ,ಉಪಾಧ್ಯಕ್ಷರಾದ ಭವಾನಿ, ಸುರೇಖ, ಕೋಶಾಧಿಕಾರಿ ಸವಿತ ಮತ್ತಿತರರು ಉಪಸ್ಥಿತರಿದ್ದರು.