ಮಂಗಳೂರು, ಫೆ. 28 (DaijiworldNews/TA): ನಗರದ ದಕ್ಕೆ ಪ್ರದೇಶದಲ್ಲಿ ವಿದ್ಯುತ್ ಕಂಬ ಬಿದ್ದು, ಮೃತಪಟ್ಟ ಕಾರ್ಮಿಕ ಮುರುಗನ್ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಹಾಗೂ ಕಾರ್ಮಿಕನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ DYFI ಜಂಟಿ ನೇತೃತ್ವದಲ್ಲಿ ದಕ್ಕೆ ಪ್ರದೇಶದಲ್ಲಿ ಪ್ರತಿಭಟನೆ ನಡೆಯಿತು.


300ಕ್ಕೂ ಮಿಕ್ಕಿದ ಮೀನುಗಾರಿಕಾ ಕಾರ್ಮಿಕರು ಮೀನುಗಾರಿಕಾ ಇಲಾಖೆ ಹಾಗೂ ಜಿಲ್ಲಾಡಳಿತದ ಬೇಜವಾಬ್ದಾರಿ ಖಂಡಿಸಿ ಆಕ್ರೋಶ ಭರಿತರಾಗಿ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ಘಾಟಿಸಿ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹಾಗೂ DYFI ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿದರು.
ಪ್ರತಿಭಟನೆಯಲ್ಲಿ CITU ಜಿಲ್ಲಾ ನಾಯಕರಾದ ರವಿಚಂದ್ರ ಕೊಂಚಾಡಿ, ನಾಗೇಶ್ ಕೊಟ್ಯಾನ್, DYFI ಜಿಲ್ಲಾ ನಾಯಕರಾದ ಮನೋಜ್ ವಾಮಂಜೂರು, ನವೀನ್ ಕೊಂಚಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.