ಮಂಗಳೂರು, ಮಾ. 22 (DaijiworldNews/TA): ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಸೇವಿಸಿದ ಇಬ್ಬರನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಕ್ತಿನಗರದ ನೀತಿನಗರ ನಿವಾಸಿ ರಿತೇಶ್ (25) ಮತ್ತು ಪದವು ಗ್ರಾಮದ ಜಿತೇಶ್ (23) ಬಂಧಿತ ಆರೋಪಿಗಳು.

ಗಸ್ತಿನಲ್ಲಿದ್ದ ಪೊಲೀಸರು ಶಕ್ತಿನಗರದ ನೀತಿನಗರ ಬಳಿ ಮಾದಕ ವಸ್ತುವನ್ನು ಸೇವನೆ ಮಾಡಿದಂತೆ ಕಂಡುಬಂದ ರಿತೇಶ್ ನನ್ನು ವಿಚಾರಣೆಗೆ ಒಳಪಡಿಸಿ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಇನ್ನೊಂದು ಪ್ರಕರಣದಲ್ಲಿ ಶಕ್ತಿನಗರದ ನಾಲ್ಯಪದವು ಬಳಿ ಮಾದಕ ವಸ್ತು ಸೇವನೆ ಮಾಡಿದಂತೆ ತೋರುವ ಜಿತೇಶ್ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.