ಉಡುಪಿ, ಮಾ. 26 (DaijiworldNews/TA): ವಾರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಕುಂದಾಪುರದಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಇನ್ನು ಬೈಂದೂರು ನೂತನ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್ ಗಳು ಪ್ರವೇಶಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.