ಮಂಜೇಶ್ವರ, ಮಾ. 27 (DaijiworldNews/TA) : ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಅವರ ಪರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾ.26 ರಂದು ಗುರುವಾರ ಬೆಳಗ್ಗೆಯಿಂದ ಮಂಜೇಶ್ವರದ ವರ್ಕಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಹತ್ತಿರದ ಕ್ಷೇತ್ರವಾಗಿರುವ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ವರ್ಕಾಡಿ ಗ್ರಾಮದಲ್ಲಿರುವ ವರ್ಕಾಡಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು ಕಾರ್ಯಕರ್ತರ ಜೊತೆ ಚರ್ಚಿಸಿದರು. ಬಳಿಕ ಕಾರ್ಯಕರ್ತರ ಜೊತೆಗೆ ತೆರಳಿದ ಅವರು ಮತದಾರರ ಮನವೊಲಿಸಿ ಮತನೀಡುವಂತೆ ಮನವಿ ಮಾಡಿದರು.
ಈ ಸಂದರ್ಭ ಗ್ರಾ.ಪಂ.ಮಾಜಿ ಸದಸ್ಯ ರಾಜ್ ಕುಮಾರ್ ಶೆಟ್ಟಿ, ವರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ ನಾಯ್ಕ್ ಪೊಯ್ಯೆ, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಯತಿರಾಜ್ ಶೆಟ್ಟಿ ಬಿಜೆಪಿ ಕಾರ್ಯಕರ್ತರಾದ ರಾಜೇಶ್ ಮದಕ, ರವಿರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.