ಬಂಟ್ವಾಳ, ಏ. 07 (DaijiworldNews/TA): ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹಸವಾರ ಗಾಯಗೊಂಡ ಘಟನೆ ಬಿ.ಸಿ.ರೋಡ್ ಸಮೀಪದ ಮೆಲ್ಕಾರ್ ನಲ್ಲಿ ಸಂಭವಿಸಿದೆ. ಗಾಯಾಳುವನ್ನು ಪ್ರಥಮ್ ಎಂದು ಗುರುತಿಸಲಾಗಿದೆ.

ವೈಶಾಕ್ ಹಾಗೂ ಪ್ರಥಮ್ ಅವರು ದ್ವಿಚಕ್ರ ವಾಹನದಲ್ಲಿ ಮೆಲ್ಕಾರ್ ನಿಂದ ಮುಡಿಪು ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಮೆಲ್ಕಾರ್ ಜಂಕ್ಷನ್ ಬಳಿ ಸಜೀಪ ಕಡೆಯಿಂದ ಬಂದ ಒಮಿನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಪ್ರಥಮ್ ಅವರು ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈಶಾಕ್ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದು, ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.