ಮಂಗಳೂರು, ಏ. 07 (DaijiworldNews/TA): ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಯುವಕನ ವಿರುದ್ದ ಕಾವೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಕುಂಟಿಕಾನದಲ್ಲಿರುವ ಬಾರ್ವೊಂದರ ಬಳಿ ಶನಿವಾರ ರಾತ್ರಿ 9ಕ್ಕೆ ಕಾಪಿಗುಡ್ಡೆಯ ವೇಣುಗೋಪಾಲ (21) ಎಂಬಾತ ಮಾದಕ ವಸ್ತು ಸೇವನೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿ ವಿಚಾರಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.