ಉಡುಪಿ,ಏ. 12 (DaijiworldNews/TA): ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ವೈಭವದ ದೀಪಾಲಂಕಾರವನ್ನು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಅವರು ಉದ್ಘಾಟನೆಯನ್ನು ನೆರವೇರಿಸಿದರು.

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಉಪಾಧ್ಯಾಯ, ಹಿರಿಯರಾದ ಭುಜಂಗ ಶೆಟ್ಟಿ , ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.