ಕಾರ್ಕಳ, ಏ. 16 (DaijiworldNews/TA): ಹೆಬ್ರಿ- ಕಾರ್ಕಳ ರಾಜ್ಯ ಹೆದ್ದಾರಿ ಮುನಿಯಾಲಿನ ಚಟ್ಕಲ್ ಪಾದೆಯಲ್ಲಿ ಉಜಿರೆಯಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಇನೋವಾ ಕಾರೊಂದು ಬುಧವಾರ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಾಯದಿಂದ ಪಾರಾಗಿದೆ. ರಸ್ತೆಯಲ್ಲಿ ಬರುತ್ತಿದ್ದ ರಿಕ್ಷಾ, ಬೈಕ್ ಅನ್ನು ತಪ್ಪಿಸಲು ಹೋಗಿ ಕಾರು ರಸ್ತೆ ಬದಿ ಚರಂಡಿಗೆ ಬಿದ್ದಿದೆ. ಕಾರಿನಲ್ಲಿದ್ದ ಮಹಿಳೆ, ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.