ಕಾಪು, ಏ. 17 (DaijiworldNews/TA): ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಂಗಾಳ ಕಟ್ಟಿಕೆರೆ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಮಾಹಿತಿ ದೊರೆತ ತಕ್ಷಣ ಕಾಪು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಘಟನೆ ಪರಿಶೀಲಿಸಿದ್ದಾರೆ. ಅಪಘಾತದ ನಿಖರ ಕಾರಣಗಳ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.