ಮಂಗಳೂರು, ಏ. 30 (DaijiworldNews/AK): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಸುರೇಂದ್ರ ಕಂಬಳಿ ಇವರ ಅಧ್ಯಕ್ಷತೆಯಲ್ಲಿಇಂದು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಸಭೆಯ ಪ್ರಾರಂಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಮುಂದಿನ ಆದೇಶದವರೆಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅವಧಿಯನ್ನ ವಿಸ್ತರಿಸಿರುವ ಬಗ್ಗೆ ತಿಳಿಸಿದರು.
ಇನ್ನು ಮುಂಬರುವ ಮುಂಗಾರು ಮಳೆಯ ಸಮಯದಲ್ಲಿ ವಿದ್ಯುತ್ ಅವಘಡಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮೆಸ್ಕಾಂ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಪ್ರತಿಯೊಂದು ಉಪವಿಭಾಗಕ್ಕೆ ಈಗಾಗಲೇ 6 ಗ್ಯಾಂಗ್ ಮ್ಯಾನ್ ಹಾಗೂ ಗಾಡಿ ವ್ಯವಸ್ಥೆಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯ ಉಪಸ್ಥಿತರಿದ್ದು, ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ ಅಲ್ ಸ್ಟನ್ ಡಿ ಕುನ್ಹ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ, ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿ ಸೋಜಾ, ವಿದ್ಯಾ, ಡಿ. ಎಂ. ಮುಸ್ತಾಪ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಸುವರ್ಣಾ ಹೆಗಡೆ ಹಾಗೂ ಮತ್ತಿತ್ತರರು ಹಾಜರಿದ್ದರು.