ವಿಜಯಪುರ ಡಿ 27: ಇಲ್ಲಿನ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಘಟನೆ ಹಿನ್ನೆಲೆಯಲ್ಲಿ ಬಾಲಕಿಯ ಮನೆಗೆ ತೆರಳಿ ಬಾಲಕಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶೋಭಾ ಕರಂದ್ಲಾಜೆ,ಆರೋಪಿಗಳನ್ನು ಕೂಡಲೇ ಬಂಧಿಸಿ ಬಾಲಕಿಯ ಕುಟುಂಬ ಸದಸ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನೆ ನಡೆಸಿದರು.ಅತ್ಯಾಚಾರ ನಡೆಸುವ ಆರೋಪಿಗಳ ಪುರುಷತ್ವ ಹರಣ ಮಾಡಲು ಕಾನೂನು ರಚನೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.ವಿಜಯಪುರದಲ್ಲಿ ಗಾಂಜಾ ಮಾರಾಟ ಎಗ್ಗಿಲ್ಲದೆ ಸಾಗಿದೆ. ಪೊಲೀಸರು ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ. ಈ ಬಾಲಕಿಯ ಶವ ಪತ್ತೆಯಾದ ಮನೆಯಲ್ಲಿ ಏನೆಲ್ಲ ಚಟುವಟಿಕೆಗಳು ನಡೆದಿವೆ ಎಂಬುದರ ಕುರಿತು ತನಿಖೆಯಾಗಬೇಕು. ಅಲ್ಲದೇ, ಇಂಥ ಎಷ್ಟು ಮನೆಗಳು ವಿಜಯಪುರದಲ್ಲಿವೆ ಎಂಬುದರ ಕುರಿತು ತನಿಖೆಯಾಗಬೇಕು ಎಂದು ಆಗ್ರಹಿಸಿದರು.