ಮಂಗಳೂರು, ಮೇ. 28 (DaijiworldNews/AK): ಭಾರತ ರಾಷ್ಟ್ರೀಯ ವಿದ್ಯಾರ್ಥಿ ಸಂಘ- ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ಅವರನ್ನು ನೇಮಕ ಮಾಡಲಾಗಿದೆ.

ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.
ಈಥನ್ ಅವರ ಸಮರ್ಪಣೆ, ನಾಯಕತ್ವ ಮತ್ತು ಬದ್ಧತೆಯು ಸಂಘಟನೆಯನ್ನು ಬಲಪಡಿಸಲು ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಸೇವೆ ಸಲ್ಲಿಸಲು ಹೆಚ್ಚಿನ ಕೊಡುಗೆ ನೀಡಲಿದೆ ಎಂಬುದಾಗಿ ಸಂಘಟನೆಯ ನಾಯಕತ್ವವು ವಿಶ್ವಾಸ ವ್ಯಕ್ತಪಡಿಸಿದೆ.