ವಿಟ್ಲ, ಜೂ. 05 (DaijiworldNews/TA): ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.