ಕಾಸರಗೋಡು, ಜೂ. 08 (DaijiworldNews/AK): ಭಾರೀ ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ನಾಳೆ (ಜೂನ್ 9) ಕಾಸರಗೋಡು ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಜೂ.೯ (ಮಂಗಳವಾರ)ದಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪ್ರೊಫೆಷನಲ್ ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಟ್ಯೂಶನ್ ಕೇಂದ್ರ, ಐಸಿಎಸ್ಇ, ಸಿಬಿಸಿಐ ಶಾಲೆಗಳು, ಕೇಂದ್ರೀಯ ವಿದ್ಯಾಲಯ, ಮದ್ರಸಗಳಿಗೂ ರಜೆ ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.