ಉಳ್ಳಾಲ, ಜೂ. 10 (DaijiworldNews/TA): ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ 12 ವರ್ಷದ ಸಂಭ್ರಮದ ನಿಟ್ಟಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಮತ್ತು ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ದ.ಕ ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಪ್ರಧಾನ ಕಾರ್ಯದರ್ಶಿ ದಯಾನಂದ್ ತೊಕ್ಕೊಟ್ಟು, ಮಹಿಳಾ ಮೋರ್ಚಾ ಅಧ್ಯಕ್ಷ ಮಾದವಿ ಉಳ್ಳಾಲ್, ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಮಂಜುಳಾ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷ ಧನಲಕ್ಷ್ಮಿ ಗಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಗಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.