ಬಂಟ್ವಾಳ, ಜೂ. 12 (DaijiworldNews/AA): ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂನ್ 12ರಂದು ದಸ್ತಗಿರಿ ಮಾಡಿದ್ದಾರೆ.

ಬಂಟ್ವಾಳ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ (41) ದಸ್ತಗಿರಿ ಮಾಡಲಾದ ಆರೋಪಿ.
ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ:309/2017, ಕಲಂ 8 (c) 27 B NDPS ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ಆರೋಪಿಯು ತಲೆಮರೆಸಿಕೊಂಡಿದ್ದ. ಆತನ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಶ್ರೀಕಾಂತ, ಅರುಣ್ ರವರು ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ವಗ್ಗ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.
ಆರೋಪಿಯನ್ನು ದಸ್ತಗಿರಿ ಮಾಡಿದ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.