ಕಾಪು, ಜೂ. 17 (DaijiworldNews/AA): ಮಂಗಳೂರಿನಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾದ ಘಟನೆ ಜೂನ್ 17ರ ನಸುಕಿನ ಜಾವ ಉದ್ಯಾವರದಲ್ಲಿ ನಡೆದಿದೆ.



ಈ ಅಪಘಾತವು ಬುಧವಾರ ಬೆಳಗ್ಗೆ ಸುಮಾರು 2 ಗಂಟೆಯ ಸುಮಾರಿಗೆ ಉದ್ಯಾವರದ ಟೊಯೋಟಾ ಶೋರೂಮ್ ಎದುರು ಸಂಭವಿಸಿದೆ. ಲಭ್ಯವಿರುವ ಮಾಹಿತಿ ಪ್ರಕಾರ, ಕಾರು ಉಡುಪಿಯ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ. ಬಳಿಕ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು, ಹೆದ್ದಾರಿ ಬದಿಯಲ್ಲಿ ನಿರ್ಮಿಸಲಾಗಿದ್ದ ಹೊಸ ಚರಂಡಿಗೆ ಬಿದ್ದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಈ ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.