ಕುಂಬಳೆ, ಜೂ. 20 (DaijiworldNews/TA): ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಸಮೀಪದ ನಾಯ್ಕಾಪುವಿನಲ್ಲಿ ನಡೆದಿದೆ. ಬೇಳ ಕೊಳಂಬೆ ಯ ಫ್ರಾನ್ಸಿಸ್ ಡಿ’ಸೋಜ (47) ಮೃತರು.

ನಾಯ್ಕಾಪು ಮುಂಜಾಂಗಾವು ಎಂಬಲ್ಲಿ ಮನೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಫ್ರಾನ್ಸಿಸ್ ರವರನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.