ವಿಟ್ಲ, ಜು. 07 (DaijiworldNews/AA): ಲಾರಿಗಳ ಸರಣಿ ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು ಚರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ (50) ಹಾಗೂ ಕಾಸರಗೋಡು ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಬಂಧಿತ ಆರೋಪಿಗಳು.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಮಯ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರ: 38/2025, 39/2026, 41/2026, 123/2026 ಹಾಗೂ 126/2026 ರಂತೆ 5 ಪ್ರಕರಣಗಳು ದಾಖಲಾಗಿರುತ್ತದೆ. ಪ್ರಕರಣಗಳ ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಈ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಂದ ಕಳ್ಳತನ ಮಾಡಿದ 10 ಬ್ಯಾಟರಿಗಳನ್ನು ಸ್ವಾಧೀನ ಪಡಿಸಿಕೊಂಡಿರುತ್ತಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.