ಬಂಟ್ವಾಳ, ಜು. 24 (DaijiworldNews/AA): ಕಳವು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಬಿಹಾರ ವೈಶಾಲಿ ನಿವಾಸಿ ಸಂಜಯ್ ಸಹಾನಿ (48) ತಲೆಮರೆಸಿಕೊಂಡಿದ್ದ ಆರೋಪಿ.
ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ :76/2016 u/s 379 IPC ಅಡಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಪತ್ತೆಮಾಡಿ ಜು. 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿರುತ್ತದೆ.