ಉಡುಪಿ, ಜು. 28 (DaijiworldNews/AA): ಕರಾವಳಿ ಕರ್ನಾಟಕದಲ್ಲಿ 'ಪುಷ್ಯ ನಕ್ಷತ್ರ'ದ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಜು. 29ರಂದು ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜುಲೈ 29ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ.
ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ವಿಶೇಷವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.